ಸಾರಾ ಅಬೂಬಕ್ಕರ್ ಕಾದಂಬರಿಗಳಲ್ಲಿ - ಸ್ತ್ರೀ ಶಿಕ್ಷಣದ ಮಹತ್ವ
Main Article Content
Abstract
ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯ. ಶಿಕ್ಷಣ ಪಡೆದ ವ್ಯಕ್ತಿ ತನ್ನ ಕುಟುಂಬ ಮತ್ತು ಸಮಾಜದಲ್ಲಿ ಉತ್ತಮ ಬದಲಾವಣೆಗಳನ್ನು ತರಲು ಸಾಧ್ಯವಾಗುತ್ತದೆ. ಅಲ್ಲದೆ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿಯೂ ಶಿಕ್ಷಣ ಪ್ರಮುಖ ಪಾತ್ರವಹಿಸುತ್ತದೆ. ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ತರಲು ಶಿಕ್ಷಣ, ಅದರಲ್ಲೂ ಸ್ತ್ರೀ ಶಿಕ್ಷಣ ಅತ್ಯಗತ್ಯವಾಗಿದೆ. ಶಿಕ್ಷಣ ಪಡೆದ ಮಹಿಳೆಯು ಉದ್ಯೋಗಾವಕಾಶಗಳನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಯಾಗುತ್ತಾಳೆ. ಇದು ಮಹಿಳಾ ಸಬಲೀಕರಣಕ್ಕೆ ಒಂದು ಪ್ರಮುಖ ಹೆಜ್ಜೆಯಾಗಿದೆ. ಸ್ತ್ರೀ ಶಿಕ್ಷಣವು ಸಮಗ್ರ ಸಮಾಜದ ಅಭಿವೃದ್ಧಿಗೆ ಅತ್ಯಗತ್ಯವಾಗಿದೆ. ಇದು ಕೇವಲ ಮಹಿಳೆಯೊಬ್ಬಳ ಜೀವನವನ್ನು ಬದಲಾಯಿಸುವುದಿಲ್ಲ, ಇಡೀ ಸಮಾಜದ ಭವಿಷ್ಯವನ್ನು ರೂಪಿಸುತ್ತದೆ. ಸಾರಾ ಅಬೂಬಕ್ಕರ್ ಅವರು ತಮ್ಮ ಕಾದಂಬರಿಗಳಲ್ಲಿ ಹೆಣ್ಣುಮಕ್ಕಳ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳುತ್ತಾರೆ. ಇವರ ಕಾದಂಬರಿಗಳಲ್ಲಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿಗಳನ್ನು ಚಿತ್ರಿಸಲಾಗಿದೆ. ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸ್ವತಂತ್ರವಾಗಿ ಬದುಕಬೇಕು ಎಂಬುದನ್ನು ಸಾರಾ ಬಯಸುತ್ತಾರೆ. ತಮ್ಮ ಕೃತಿಗಳಲ್ಲಿ ಶಿಕ್ಷಣದ ಮಹತ್ವವನ್ನು ಚಿತ್ರಿಸುವ ಮೂಲಕ ಸಮಾಜದಲ್ಲಿ ಹೆಣ್ಣು ಮಕ್ಕಳ ಸ್ಥಾನಮಾನವನ್ನು ಸುಧಾರಿಸಲು ಪ್ರಯತ್ನಿಸುತ್ತಾರೆ.
Article Details
Issue
Section

This work is licensed under a Creative Commons Attribution-NonCommercial-ShareAlike 4.0 International License.
References
ದಳವಾಯಿ ಕೆ.ಟಿ., (2006), ಕಥೆ-ಕಾದಂಬರಿಗಳಲ್ಲಿ ಮುಸ್ಲಿಂ ಮಹಿಳಾ ಸಂವೇದನೆ, ಕರ್ನಾಟಕ ವಿ.ವಿ., ಧಾರವಾಡ.
ಸಾರಾ ಅಬೂಬಕರ್, (1985), ಸಹನಾ, ಚಂದ್ರಗಿರಿ ಪ್ರಕಾಶನ, ಮಂಗಳೂರು.
ಭೀಮಣ್ಣ ಎಚ್., (2011,) ನವಕಾದಂಬರಿಗಳ ಅವಲೋಕನ, ಶ್ರೀ ಬಲಭೀಮ್ ಪ್ರಕಾಶನ, ರಾಸಣಗಿ.
ವಾಲಿಕಾರ್ ಚನ್ನಣ್ಣ, (2002), ಸಮಗ್ರ ಕಾದಂಬರಿ ಸಂಪುಟ: ದಲಿತ, ಬಂಡಾಯ ಸಾಹಿತ್ಯ ಪ್ರಕಾಶನ, ಕಲಬುರ್ಗಿ.