ಅಸ್ಪೃಶ್ಯತೆಯ ನಿರ್ಮೂಲನೆಯಲ್ಲಿ ಸಾಂವಿಧಾನಿಕ ನಿಬಂಧನೆಗಳ ಪಾತ್ರ
Main Article Content
Abstract
ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಜನಿಸಿದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಪಡೆದು ಸಮಾಜದಲ್ಲಿ ಘನತೆಯಿಂದ ಜೀವಿಸಲು ಅವಕಾಶವಿದೆ. ಭಾರತದಲ್ಲಿ ಸಾವಿರಾರು ಜಾತಿಗಳ ಸಂಕೀರ್ಣತೆಯಿದ್ದರೂ ಸಹ ಎಲ್ಲರೂ ಸಮಾನರು ಎಂಬ ಸಮಾನತೆಯ ಆಶಯವನ್ನು ಇಲ್ಲಿನ ಸಂವಿಧಾನ ಎತ್ತಿಹಿಡಿದಿದೆ. ವಿಶ್ವದ ಅತ್ಯಂತ ದೊಡ್ಡ ಸಂವಿಧಾನ ನಮ್ಮದಾಗಿದ್ದು ಇದರ ಹೆಮ್ಮೆಯ ಸಂಗತಿಯೆಂದರೆ ಅದುವೇ ಸಮಾನತೆ ಎಂದು ಹೇಳಬಹುದು. ಭಾರತದ ಸರ್ಕಾರವು ಸಂವಿಧಾನ ಜಾರಿಯಾದಾಗಿನಿಂದ ಹಿಡಿದು ಪ್ರಸ್ತುತ ದಿನಮಾನದವರೆಗೆ ಇಲ್ಲಿನ ಪ್ರತಿಯೊಬ್ಬ ಪ್ರಜೆಯೂ ಭ್ರಾತೃತ್ವ ಭಾವನೆಯೊಂದಿಗೆ ಯಾವುದೇ ಜಾತಿ, ವರ್ಗ ಮತ್ತು ಮತಗಳ ಬೇಧಭಾವವಿಲ್ಲದೇ 'ನಾವೆಲ್ಲರೂ ಭಾರತೀಯರು, ನಾವೆಲ್ಲರೂ ಸಮಾನರು' ಎನ್ನುವಂತೆ ಕಾಯ್ದೆ ಕಾನೂನುಗಳನ್ನು ಮತ್ತು ಆಡಳಿತಾತ್ಮಕ ಸುಧಾರಣೆಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಭಾರತ ಸರ್ಕಾರವು ಮೊದಲ ಬಾರಿಗೆ ಅಸ್ಪೃಶ್ಯತೆಯನ್ನು ತಡೆಯಲು 1955ರಲ್ಲಿ ಅಸ್ಪೃಶ್ಯತಾ ನಿವಾರಣಾ ಕಾಯ್ದೆಯನ್ನು ಜಾರಿಗೊಳಿಸಿತು. ಸಂವಿಧಾನದ 17ನೇ ವಿಧಿಯು ಅಸ್ಪೃಶ್ಯತೆಯ ಆಚರಣೆಯನ್ನು ನಿಷೇಧಿಸಿದ್ದು ಇದನ್ನು ಆಚರಿಸುವವರಿಗೆ ಕಠಿಣ ಶಿಕ್ಷೆಯನ್ನು ನೀಡುತ್ತಾ ಬಂದಿದೆ. ಆದರೂ ಸಹ ಈ ರೀತಿಯ ಸಮಾನತೆಯ ಅಂಶಗಳ ನಡುವೆ ಭಾರತೀಯ ಸಮಾಜದಲ್ಲಿ ಅಸ್ಪೃಶ್ಯತೆ ಎಂಬ ಪಿಡುಗು ಹಿಂದಿನಿಂದ ಇಂದಿನವರೆಗೂ ನಡೆದು ಬಂದಿದ್ದು ಅದರ ನಿರ್ಮೂಲನೆಗೆ ಸಾಂವಿಧಾನಿಕ ನಿಬಂಧನೆಗಳು ಮತ್ತು ಕಾನೂನಾತ್ಮಕ ನಿಯಮಗಳಿದ್ದರೂ ಸಹ ಅಸ್ಪೃಶ್ಯತೆ ಸಂಪೂರ್ಣವಾಗಿ ನಿರ್ಮೂಲನೆಗೊಂಡಿದೆಯೇ ಎಂಬ ಮೂಲಭೂತ ಪ್ರಶ್ನೆಯನ್ನು ಎತ್ತಿಕೊಂಡಾಗ ಅದಕ್ಕೆ ಬರುವ ಉತ್ತರ ಇದು ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಗೊಂಡಿಲ್ಲ ಎಂಬುದಕ್ಕೆ ಹಲವಾರು ನಿದರ್ಶನಗಳು ಕಂಡುಬರುತ್ತವೆ. ಆದ್ದರಿಂದ ಈ ಸಮಸ್ಯೆಯ ಪರಿಹಾರದಲ್ಲಿ ಸಾಂವಿಧಾನಿಕ ನಿಬಂಧನೆಗಳ ಪಾತ್ರ ಏನೆಂಬುದನ್ನು ಕಂಡುಕೊಳ್ಳುವುದು ಪ್ರಸ್ತುತ ಅಧ್ಯಯನದ ಪ್ರಮುಖ ಉದ್ದೇಶವಾಗಿದೆ.
Article Details
Section

This work is licensed under a Creative Commons Attribution-NonCommercial-ShareAlike 4.0 International License.
How to Cite
References
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-1, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-3, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-6, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಮಂಗೂರು ವಿಜಯ್, (2014), ಅಸ್ಪೃಶ್ಯತೆ, ಸಂಬುದ್ಧ ಪ್ರಕಾಶನ, ಬೆಂಗಳೂರು.
ಶಿವರಾಂ ಎನ್. ಆರ್., (2017), ಭಾರತ ಭಾಗ್ಯವಿಧಾತ ಡಾ. ಬಾಬಾಸಾಹೇಬ್ ಅಂಬೇಡ್ಕರ್, ಲಕ್ಷ್ಮೀ ಮುದ್ರಣಾಲಯ, ಬೆಂಗಳೂರು.
ಷಣ್ಮುಖ ಎ., (1989), ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯ್ದೆ, ಪ್ರಸಾರಾಂಗ, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ.
ಉದಯವಾಣಿ ದಿನಪತ್ರಿಕೆ, 26 ಸೆಪ್ಟೆಂಬರ್ 2021.
ಕನ್ನಡ ಪ್ರಭ ದಿನಪತ್ರಿಕೆ, 24 ನವೆಂಬರ್ 2023.
ಪ್ರಜಾವಾಣಿ ದಿನಪತ್ರಿಕೆ, 15 ನವೆಂಬರ್ 2024.
ವಿಜಯ ಕರ್ನಾಟಕ ದಿನಪತ್ರಿಕೆ, 11 ನವೆಂಬರ್ 2024.