ಕನ್ನಡ ಜೈನಕಾವ್ಯಗಳ ಪರಂಪರೆ

Authors

  • ಕರುಣಾ ಜಮದರಖಾನಿ ಅತಿಥಿ ಪ್ರಾಧ್ಯಾಪಕರು, ಕನ್ನಡ ಅಧ್ಯಯನ ಸಂಸ್ಥೆ, ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ.

Keywords:

ಪಂಪ, ವಿಕ್ರಮಾರ್ಜುನ ವಿಜಯ, ಪೊನ್ನ, ಶಾಂತಿಪುರಾಣ, ರನ್ನ, ಸಾಹಸಭೀಮ ವಿಜಯ, ಅಜಿತ ತೀರ್ಥಂಕರ ಪುರಾಣ, ಚಾವುಂಡರಾಯ, ಚಾವುಂಡರಾಯ ಪುರಾಣ

Abstract

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹತ್ತನೇ ಶತಮಾನದಿಂದ ಸುಮಾರು ಹನ್ನೆರಡನೇ ಶತಮಾನದ ವರೆಗಿನ ಕಾಲಘಟ್ಟವನ್ನು ಹಳೆಗನ್ನಡ ಎಂದು ಗುರುತಿಸಬಹುದು. ಈ ಕಾಲದ ಸಾಹಿತ್ಯ ಮುಖ್ಯವಾಗಿ ಜೈನ ಧರ್ಮವನ್ನು ಅವಲಂಬಿಸಿದೆ. ಕನ್ನಡ ಸಾಹಿತ್ಯ ಚರಿತ್ರೆಯ ಈ ಘಟ್ಟಕ್ಕೆ ಆದಿ-ಕಾವ್ಯ ಎಂದೂ ಸಹ ಕರೆಯಬಹುದು. ಈ ಕಾಲದ ಅತಿ ಪ್ರಸಿದ್ಧ ಕವಿಯೆಂದರೆ ಆದಿಕವಿಪಂಪ.


ಪಂಪನ ‘ವಿಕ್ರಮಾರ್ಜುನ ವಿಜಯ’ ಅಥವಾ ‘ಪಂಪ ಭಾರತ’‌ ಇಂದಿಗೂ ಮೇರು ಕೃತಿಯೆಂದು ಪರಿಗಣಿತವಾಗಿದೆ. ಪಂಪ ಭಾರತ ಮತ್ತು ತನ್ನ ಇನ್ನೊಂದು ಮುಖ್ಯಕೃತಿಯಾದ ಆದಿಪುರಾಣದ ಮೂಲಕ ಪಂಪ ಕನ್ನಡ ಕಾವ್ಯಪರಂಪರೆಯ ದಿಗ್ಗಜರಲ್ಲಿ ಒಬ್ಬನಾಗಿದ್ದಾನೆ. ಪಂಪ ಭಾರತ ಸಂಸ್ಕೃತ ಮಹಾಭಾರತದ ಕನ್ನಡ ರೂಪಾಂತರ. ತನ್ನ ಮಾನವತಾವಾದ ಹಾಗೂ ಗಂಭೀರ ಲೇಖನ ಶೈಲಿಯ ಮೂಲಕ ಕನ್ನಡದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾಗಿದ್ದಾನೆ. ‘ಮಾನವ ಕುಲ ತಾನೊಂದೇ ವಲಂ’ ಎಂದು ವಿಶ್ವಮಾನವ ತತ್ವವನ್ನು ಸಾರಿದ ಜಗದ ಕವಿ ಪಂಪ.


ಇದೇ ಕಾಲದ ಇನ್ನೊಬ್ಬ ಪ್ರಮುಖ ಲೇಖಕನೆಂದರೆ ಶಾಂತಿನಾಥ ಪುರಾಣವನ್ನು ರಚಿಸಿದ ಪೊನ್ನ (939-966). ಈ ಕಾಲದ ಮತ್ತೊಬ್ಬ ಹೆಸರಾಂತ ಕವಿ ರನ್ನ (949-?). ರನ್ನನ ಪ್ರಮುಖ ಕೃತಿಗಳು ಜೈನ ಧರ್ಮೀಯವಾದ ಅಜಿತ ತೀರ್ಥಂಕರ ಪುರಾಣ ಮತ್ತು ಗದಾಯುದ್ಧಂ ಅಥವಾ ಸಾಹಸಭೀಮ ವಿಜಯ.

References

ಕೇಶವಭಟ್ಟ ಟಿ. (1960). ಶಿವಕೋಟ್ಯಾಚಾರ ವಡ್ಡಾರಾಧನೆ (ಗದ್ಯಾನುವವಾದ). ಕನ್ನಡ ಸಾಹಿತ್ಯ ಪರಿಷತ್ತು. ಬೆಂಗಳೂರು.

ಪದ್ಮಪ್ರಸಾದ್ ಎಸ್. ಪಿ. (2021). ಕನ್ನಡ ಜೈನ ಸಾಹಿತ್ಯ ಚರಿತ್ರೆ: ಸಂಪುಟ-1 (ಸಂ). ಎಸ್. ಪಿ. ಪದ್ಮಪ್ರಸಾದ್. ಬೆಂಗಳೂರು.

ಶಿವಾನಂದ ಎಸ್. (2008). ಕನ್ನಡ ಜೈನ ಪುರಾಣಗಳು: ಒಂದು ಸಮಗ್ರ ಅಧ್ಯಯನ. ಕನ್ನಡ ಸಾಹಿತ್ಯ ಪರಿಷತ್ತು. ಬೆಂಗಳೂರು.

Downloads

Published

09.07.2024

How to Cite

ಕರುಣಾ ಜಮದರಖಾನಿ. (2024). ಕನ್ನಡ ಜೈನಕಾವ್ಯಗಳ ಪರಂಪರೆ. AKSHARASURYA, 4(03), 55 to 60. Retrieved from https://aksharasurya.com/index.php/latest/article/view/447

Issue

Section

ಸಂಶೋಧನಾ ಲೇಖನಗಳು. | RESEARCH ARTICLE.