ಗುಮ್ಮಳಾಪುರದ ಸಿದ್ಧಲಿಂಗ ಯತಿಗಳ ಶೂನ್ಯ ಸಂಪಾದನೆ: ಕೆಲವು ಟಿಪ್ಪಣಿಗಳು

Authors

  • ಸಿ. ನಾಗಭೂಷಣ ಹಿರಿಯ ಪ್ರಾಧ್ಯಾಪಕರು, ಕನ್ನಡ ಅಧ್ಯಯನ ಕೇಂದ್ರ, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು.

Keywords:

ಶೂನ್ಯ ಸಂಪಾದನೆ, ವಚನ ಚಳವಳಿ, ಗ್ರಂಥ ಸಂಪಾದನೆ, ಗುಮ್ಮಳಾಪುರದ ಸಿದ್ಧಲಿಂಗ ಯತಿ, ಶಿವಗಣ ಪ್ರಸಾದಿಮಹದೇವಯ್ಯ

Abstract

ಅಭಿನವ ಅಲ್ಲಮರೆಂದು ಖ್ಯಾತರಾದ ತೋಂಟದ ಸಿದ್ಧಲಿಂಗಯತಿಗಳು, ತಮ್ಮ ಶಿಷ್ಯ-ಪ್ರಶಿಷ್ಯ ಪರಂಪರೆಯ ಮೂಲಕ, ಗ್ರಂಥಸಂಪಾದನೆಯ ವಿಧಿವಿಧಾನಗಳನ್ನು ಅನ್ವಯಿಸಿ ವಚನಗಳನ್ನು ಸಂಕಲಿಸುವ ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ಕೈಗೊಂಡಿರುವುದು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿಯೇ ವಿಶಿಷ್ಟವಾದುದಾಗಿದೆ. ವಚನ ರಚನೆ ಹಾಗೂ ವಚನ ರಕ್ಷಣೆ, ವ್ಯಾಖ್ಯಾನ ಎರಡರಲ್ಲಿಯೂ ಸ್ಥಾನ ಪಡೆದಿದ್ದಾರೆ. ವಚನಗಳನ್ನು ಸಂಕಲಿಸುವ, ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ತಮ್ಮ ಶಿಷ್ಯ ಪ್ರಶಿಷ್ಯ ಪರಂಪರೆಯ ಮೂಲಕ ಅನುಷ್ಠಾನಗೊಳಿಸಿದರು. “ಕಲ್ಯಾಣ ಕ್ರಾಂತಿಯ ವಿಪ್ಲವದ ನಂತರ ಅಳಿದುಳಿದ ವಚನ ಸಾಹಿತ್ಯವನ್ನು ಸಂರಕ್ಷಿಸುವ ಶೋಧಿಸುವ, ಸಂಕಲಿಸುವ, ವ್ಯಾಖ್ಯಾನಿಸುವ ಮೂಲಕ ಕಾಪಾಡಿಕೊಂಡು ಬರಲು 15 ಮತ್ತು 16 ನೇ ಶತಮಾನದ ಸಂಕಲನಕಾರರು ಕಾರಣರಾಗಿದ್ದಾರೆ. ಈ ಕಾರ್ಯ ವಿಧಾನದಲ್ಲಿ ಆಧುನಿಕ ಸಂಶೋಧನೆ ವಿಧಿವಿಧಾನಗಳಾದ ಆಕರ ಸಂಗ್ರಹ, ಸಂಯೋಜನೆ, ವಿಶ್ಲೇಷಣೆ ಎಂಬ ಮೂರು ಹಂತಗಳನ್ನು ಗುರುತಿಸಬಹುದಾಗಿದೆ. ಅಲ್ಲಲ್ಲಿ ಅಡಗಿದ್ದ ವಚನಗಳನು ಶೋಧಿಸುವಲ್ಲಿ, ಸಂಗ್ರಹಿಸುವಲ್ಲಿ, ನಾಮಾನುಗುಣವಾಗಿ, ವಿಷಯಾನುಗುಣವಾಗಿ ಜೋಡಿಸುವಲ್ಲಿ, ತಾತ್ವಿಕ ದೃಷ್ಟಿಯಿಂದ ಸಂಕಲಿಸುವಲ್ಲಿ, ಸಂವಾದ ರೂಪದಲ್ಲಿ ಸಂಯೋಜಿಸಿ ಸಂಪಾದಿಸುವಲ್ಲಿ, ವಚನಗಳ ಅಂತರಾರ್ಥ ಅರಿತು ವ್ಯಾಖ್ಯಾನಿಸುವಲ್ಲಿ ಆಧುನಿಕ ಗ್ರಂಥ ಸಂಪಾದನೆಯ ಸರ್ವ ಸಾಮಾನ್ಯ ತತ್ವಗಳನ್ನೇ ಅನುಸರಿಸಿದ್ದಾರೆ.” (ಸಿ. ನಾಗಭೂಷಣ; ಶರಣ ಸಾಹಿತ್ಯ ದೀಪಿಕೆ, ಪು. 204) “ಶೂನ್ಯಸಂಪಾದನೆ” ಕೃತಿಯು ಶರಣರ ವಚನಗಳನ್ನು ಬಳಸಿಕೊಂಡು ಶರಣರ ಜೀವನ ಚಿತ್ರವನ್ನು ಬಿಡಿಸುವ ಹಾಗೂ ಶರಣತತ್ವವನ್ನು ಪ್ರತಿಪಾದಿಸುವುದಾಗಿದೆ. ಶೂನ್ಯಸಂಪಾದನೆಯು ತನ್ನ ಸಮಕಾಲೀನ ಸಂದರ್ಭದ ಅಗತ್ಯಗಳಿಗೆ ಸ್ಪಂದಿಸಿದರೆ, ಶರಣರು ರಚಿಸಿದ ಮೂಲ ವಚನಗಳು ಸಮಕಾಲೀನತೆಯ ಜತೆಗೆ ಸಾರ್ವಕಾಲಿಕ ಸತ್ಯಗಳ ಪ್ರತಿಪಾದನೆಗಳನ್ನು ಒಳಗೊಂಡಿವೆ. ಹಾಗೆಯೇ ಮಾನವನ ಬದುಕಿಗೆ ಮೂಲವಾಗಿ ಬೇಕಾಗಿರುವ ಆಧ್ಯಾತ್ಮದ ತಿರುಳನ್ನು ತಿಳಿಸಿಕೊಡುತ್ತದೆ.

References

ರವೀಂದ್ರನಾಥ ಕೆ. ಮತ್ತು ಪ್ರಕಾಶ ಗಿರಿಮಲ್ಲನವರ (ಸಂ.), (2021), ಗುಮ್ಮಳಾಪುರದ ಸಿದ್ಧಲಿಂಗ ದೇವರ ಶೂನ್ಯ ಸಂಪಾದನೆ, ಪ್ರಭುದೇವರ ಜನಕಲ್ಯಾಣ ಸಂಸ್ಥೆ, ಶ್ರೀ ಪ್ರಭುದೇವರ ಸಂಸ್ಥಾನವಿರಕ್ತ ಮಠ, ಸೊಂಡೂರು.

ಶಿವರುದ್ರಪ್ಪ ಜಿ. ಎಸ್‌., (1975), ಕನ್ನಡ ಸಾಹಿತ್ಯ ಸಮೀಕ್ಷೆ, ಪ್ರಸಾರಾಂಗ, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು.

ತಿಪ್ಪೇರುದ್ರಸ್ವಾಮಿ ಹೆಚ್‌., (1994), ಶರಣರ ಅನುಭಾವ ಸಾಹಿತ್ಯ, ಡಿ.ವಿ.ಕೆ. ಮೂರ್ತಿ ಪ್ರಕಾಶನ, ಮೈಸೂರು.

ಮುಗಳಿ ರಂ. ಶ್ರೀ., (1998), ಕನ್ನಡ ಸಾಹಿತ್ಯ ಚರಿತ್ರೆ, ಗೀತಾ ಬುಕ್‌ ಹೌಸ್‌, ಮೈಸೂರು.

ಚಿದಾನಂದಮೂರ್ತಿ ಎಂ., (1988), ಶೂನ್ಯಸಂಪಾದನೆಯನ್ನು ಕುರಿತು, ಪ್ರಿಯದರ್ಶಿನಿ ಪ್ರಕಾಶನ, ಬೆಂಗಳೂರು.

ಕಲಬುರ್ಗಿ ಎಂ. ಎಂ., (1995), ಮಾರ್ಗ-1, ಕರ್ನಾಟಕ ಬುಕ್‌ ಏಜೆನ್ಸಿ, ಬೆಂಗಳೂರು.

ವಿದ್ಯಾಶಂಕರ ಎಸ್., (2008), ಶಬ್ದ ಸಂಪುಟ, ಸ್ನೇಹ ಪ್ರಕಾಶನ, ಬೆಂಗಳೂರು.

ವಿದ್ಯಾಶಂಕರ ಎಸ್., (2014), ವೀರಶೈವ ಸಾಹಿತ್ಯ ಚರಿತ್ರೆ: ಸಂಪುಟ-3, ಭಾಗ-1, ಪ್ರಿಯದರ್ಶಿನಿ ಪ್ರಕಾಶನ, ಬೆಂಗಳೂರು.

ನಾಗಭೂಷಣ ಸಿ., (2017), ಶರಣ ಸಾಹಿತ್ಯ ದೀಪಿಕೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ, ಕಲಬುರಗಿ.

ನಾಗಭೂಷಣ ಸಿ., (2023), ಕನ್ನಡ ಸಾಹಿತ್ಯ-ಸಂಸ್ಕೃತಿ ಬುತ್ತಿ, ಪ್ರಿಯದರ್ಶಿನಿ ಪ್ರಕಾಶನ, ಬೆಂಗಳೂರು.

ಬಸವರಾಜ ಸಬರದ (ಸಂ.), (2011), ಶೂನ್ಯ ಸಂಪಾದನೆ ಪ್ರಸಾರಾಂಗ, ಗುಲಬರ್ಗಾ ವಿಶ್ವವಿದ್ಯಾಲಯ, ಗುಲಬರ್ಗಾ.

Downloads

Published

02.04.2025

How to Cite

ಸಿ. ನಾಗಭೂಷಣ. (2025). ಗುಮ್ಮಳಾಪುರದ ಸಿದ್ಧಲಿಂಗ ಯತಿಗಳ ಶೂನ್ಯ ಸಂಪಾದನೆ: ಕೆಲವು ಟಿಪ್ಪಣಿಗಳು. ಅಕ್ಷರಸೂರ್ಯ (AKSHARASURYA), 6(02), 01 TO 19. Retrieved from https://aksharasurya.com/index.php/latest/article/view/607

Issue

Section

ಸಂಶೋಧನಾ ಲೇಖನಗಳು. | RESEARCH ARTICLE.